ಹಣವಿಲ್ಲ, ಮೊಬೈಲ್‌ ಇಲ್ಲ, ಎಟಿಎಂ ಬಳಸುತ್ತಿಲ್ಲ:

Bengaluru Division:

Font size:

ಎರಡೂವರೆ ತಿಂಗಳಾದರೂ ಪತ್ತೆಯಾಗದ ಪಿಯುಸಿ ವಿದ್ಯಾರ್ಥಿನಿಯರು; ಇದು ‘ಮಿಸ್ಟರಿ’ ನಾಪತ್ತೆಯೇ?

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಪ್ರಕರಣವು ಈಗ ಪೊಲೀಸರು ಹಾಗೂ ಪೋಷಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ಕಳೆದ ಜನವರಿ 31ರಂದು ಮನೆ ಬಿಟ್ಟವರು ಇಂದಿಗೂ ಮರಳಿ ಬಂದಿಲ್ಲ. ಬರೋಬ್ಬರಿ 75 ದಿನಗಳು ಕಳೆದರೂ ಇವರ ಬಗ್ಗೆ ಯಾವುದೇ ಸುಳಿವು ಸಿಗದಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಸಾಮಾನ್ಯವಾಗಿ ನಾಪತ್ತೆಯಾದವರು ಎಲ್ಲೋ ಒಂದು ಕಡೆ ಮೊಬೈಲ್ ಬಳಸುತ್ತಾರೆ ಅಥವಾ ಎಟಿಎಂ ಮೂಲಕ ಹಣ ಡ್ರಾ ಮಾಡುತ್ತಾರೆ. ಆದರೆ, ಈ ಇಬ್ಬರು ಬಾಲಕಿಯರ ಬಳಿ ಮೊಬೈಲ್ ಫೋನ್ ಇಲ್ಲ, ಇತ್ತ ಎಟಿಎಂ ಕಾರ್ಡ್‌ಗಳನ್ನು ಸಹ ಅವರು ಬಳಸುತ್ತಿಲ್ಲ. ಮನೆಯಿಂದ ಹೊರಡುವಾಗ ಇವರು ಕೇವಲ 3 ಸಾವಿರ ರೂಪಾಯಿ ಮಾತ್ರ ತೆಗೆದುಕೊಂಡು ಹೋಗಿದ್ದು, ಇಷ್ಟು ಸುದೀರ್ಘ ಕಾಲ ಆ ಅಲ್ಪ ಹಣದಲ್ಲಿ ಜೀವನ ನಡೆಸಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

​ಈ ಇಬ್ಬರು ಬಾಲಕಿಯರ ಪತ್ತೆಗಾಗಿ ಪೊಲೀಸರು ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ಬಲೆ ಬೀಸಿದ್ದಾರೆ. ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ತನಿಖಾ ತಂಡಗಳು ಹುಡುಕಾಟ ನಡೆಸಿವೆ. ರಾಜ್ಯದ ಚಾಮರಾಜನಗರ ಹಾಗೂ ಮೈಸೂರು ಭಾಗಗಳಲ್ಲೂ ಇವರಿಗಾಗಿ ಗಾಳ ಹಾಕಲಾಗಿದೆ. ತನಿಖೆಯ ವೇಳೆ ಇವರು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೂ ಹೋಗಿದ್ದ ಸುಳಿವು ಪೊಲೀಸರಿಗೆ ಲಭ್ಯವಾಗಿತ್ತು. ಆದರೆ, ಪೊಲೀಸರು ಅಲ್ಲಿಗೆ ತಲುಪುವಷ್ಟರಲ್ಲಿ ಬಾಲಕಿಯರು ಅಲ್ಲಿಂದಲೂ ಜಾಗ ಖಾಲಿ ಮಾಡಿದ್ದರು. ಇವರು ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಇವರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುಲಭವಾಗಿ ಸಂಚರಿಸುತ್ತಿರಬಹುದು ಎಂದು ಶಂಕಿಸಲಾಗಿದೆ.

​ಆದರೆ, ಈ ಬಾಲಕಿಯರು ಮನೆ ಬಿಟ್ಟು ಹೋಗಲು ಬಲವಾದ ಕಾರಣವೇನು ಎಂಬುದು ಇಂದಿಗೂ ನಿಗೂಢವಾಗಿಯೇ ಉಳಿದಿದೆ. ಯಾವುದೇ ಸ್ನೇಹಿತರ ಅಥವಾ ಸಂಬಂಧಿಕರ ಮನೆಗೂ ಇವರು ಭೇಟಿ ನೀಡಿಲ್ಲ. ಇವರ ಇಷ್ಟದ ಜಾಗಗಳನ್ನೆಲ್ಲಾ ಜಾಲಾಡಿದರೂ ಪ್ರಯೋಜನವಾಗಿಲ್ಲ. ಅತ್ತ ಮಗಳಂದಿರನ್ನು ಕಾಣದೆ ಕಂಗಾಲಾದ ಪೋಷಕರು ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದು, ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಬಾಲಕಿಯರನ್ನು ಪತ್ತೆಹಚ್ಚಲು ಪೊಲೀಸರಿಗೆ ಒಂದು ವಾರದ ಗಡುವು ನೀಡಿತ್ತು. ಆದರೆ ಆ ಗಡುವು ಮುಗಿದು ಒಂದು ತಿಂಗಳು ಕಳೆದರೂ ಪೊಲೀಸರ ಕೈಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಮೊಬೈಲ್ ಮತ್ತು ಡಿಜಿಟಲ್ ಹಣಕಾಸಿನ ವ್ಯವಹಾರ ನಡೆಸದೆ ಇಬ್ಬರು ಹೆಣ್ಣುಮಕ್ಕಳು ಇಷ್ಟು ದಿನಗಳ ಕಾಲ ನಾಪತ್ತೆಯಾಗಿರುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ. ಪೋಷಕರು ಹನಿಗಣ್ಣಿನಿಂದ ತಮ್ಮ ಮಕ್ಕಳಿಗಾಗಿ ಕಾಯುತ್ತಿದ್ದು, ಪೊಲೀಸರ ತನಿಖೆ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Comments

Leave a Comment

Prev Post ಅಂಪೈರ್‌ಗೆ ಜೀವ ಬೆದರಿಕೆ ಹಾಕಿದ್ರಾ ವಿಶ್ವಪ್ರಸಿದ್ಧ ಆ ಸ್ಟಾರ್ ವೇಗಿ?
Next Post ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್ ದಂಧೆ: ಸಿಸಿಬಿ ಬಲೆಯಲ್ಲಿ ಕ್ಯಾಂಟೀನ್ ಸಿಬ್ಬಂದಿ, ಕೆಎಸ್‌ಸಿಎ ಸದಸ್ಯನಿಗಾಗಿ ಶೋಧ!

ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಬಾರದ ಲೋಕಕ್ಕೆ ಹೋದ ‘ಉಷಾ’: ತಪ್ಪು ಒಪ್ಪಿಕೊಂಡರೂ ಮನ್ನಿಸಲಿಲ್ಲವೇ ಈ ಸಮಾಜ?

​"ನಾನು ತಪ್ಪು ಮಾಡಿದ್ದು ನಿಜ, ಆದ್ರೆ ಈ ಕಿರುಕುಳ ತಾಳಲಾರೆ.." - ಕಣ್ಣೀರು ಹಾಕುತ್ತಲೇ ಸಾವಿನ ಮನೆ ಸೇರಿದ ಅಬಲೆ!

ಧಾರವಾಡ ಸೆಂಟ್ರಲ್ ಜೈಲ್ 'ಡ್ರಗ್ಸ್' ದಂಧೆ ಅಡ್ಡ: ಬೇಲಿಯೇ ಎದ್ದು ಹೊಲ ಮೇಯ್ದ ರಣರೋಚಕ ಸ್ಟೋರಿ!

ಕತ್ತಲಲ್ಲಿ ಖೈದಿಗಳಿಗೆ 'ಕಿಕ್' ನೀಡುತ್ತಿದ್ದ ಖಾಕಿಧಾರಿಗಳು: ಮುತಾಲಿಕ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರ ಮಿಡ್‌ನೈಟ್ ಆಪರೇಷನ್ ಸಕ್ಸಸ್!

ಮಂಗಳೂರಿನಲ್ಲಿ ನೆತ್ತರು ಹರಿಸಿದ ಗ್ಯಾಂಗ್‌ವರ್: ತೊಕ್ಕೊಟ್ಟು ಫ್ಲೈಓವರ್ ಮೇಲೆ 'ಟಾಬ್ಲೆಟ್ ಆರಿಫ್' ಭೀಕರ ಕೊಲೆ!

ಸಿನಿಮೀಯ ಮಾದರಿಯಲ್ಲಿ ನಡೆದ ಹತ್ಯೆ: ಬೈಕ್ ಸವಾರನ ಮೇಲೆ ಕಾರ್ ಹರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದ ದುಷ್ಕರ್ಮಿಗಳು!

ತುಂಗಭದ್ರಾ ನದಿಯ ಮಡಿಲಲ್ಲಿ ಕರಗಿದ ಕನಸುಗಳು: ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ

ಮದುವೆಯ ಸಂಭ್ರಮದ ನಡುವೆ ಮರಣ ಮೃದಂಗ: ರಾಯಚೂರು ಕುಟುಂಬದಲ್ಲಿ ಆವರಿಸಿದ ಶೋಕದ ಕಾರ್ಮೋಡ

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಯಲು: ಡಾ. ಸಮೀಕ್ಷಾ ರೆಡ್ಡಿ ಸಾವಿನ ಸುತ್ತ ನಿಗೂಢ ಜಾಲ!

ಅಲ್ಲಿ ಎಲ್ಲವೂ ಸರಿಯಿಲ್ಲ!" - ವೈದ್ಯೆಯ ಕೊನೆಯ ವಾಟ್ಸಪ್ ಸಂದೇಶಗಳು ಬಯಲು ಮಾಡಿದ ಭೀಕರ ವಾಸ್ತವ!

Read all News