ಯೋಗೇಶ್ ಗೌಡ ಹತ್ಯೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ!

Karnataka:

Font size:

ಧಾರವಾಡ ಬಿಜೆಪಿ ನಾಯಕನ ಕೊಲೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿದ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿ ಅಪರಾಧಿಗಳಿಗೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

​ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಈ ಸುದೀರ್ಘ ವಿಚಾರಣೆಯ ಅಂತ್ಯದಲ್ಲಿ ತೀರ್ಪು ಪ್ರಕಟಿಸಿದ್ದು, ವಿನಯ್ ಕುಲಕರ್ಣಿ ಮತ್ತು ಇತರ 15 ಸಹಚರರಿಗೆ ಕೊಲೆ ಹಾಗೂ ಕ್ರಿಮಿನಲ್ ಪಿತೂರಿ ನಡೆಸಿದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಇದೇ ಪ್ರಕರಣದ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದ್ದು, ಹತ್ಯೆಗೀಡಾದ ಯೋಗೇಶ್ ಗೌಡ ಅವರ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ಧನ ನೀಡುವಂತೆ ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ.

​2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಜಿಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಆರಂಭದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣ ಸಿಬಿಐ ಕೈಗೆ ಸೇರಿತ್ತು. ತನಿಖೆ ತೀವ್ರಗೊಳಿಸಿದ್ದ ಸಿಬಿಐ, ಇದು ರಾಜಕೀಯ ಪ್ರೇರಿತ ಕೊಲೆ ಎಂದು ಸಾಬೀತುಪಡಿಸಿ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.

​ಸುಮಾರು ಎಂಟು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಇಂದು ಅಂತಿಮ ತೀರ್ಪು ಹೊರಬಿದ್ದಿದ್ದು, ದೋಷಿಗಳಿಗೆ ಪ್ರತಿ ಸೆಕ್ಷನ್‌ ಅಡಿಯಲ್ಲಿ ಪ್ರತ್ಯೇಕವಾಗಿ ದಂಡವನ್ನೂ ವಿಧಿಸಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೈಲು ಕೈಪಿಡಿಯ ನಿಯಮದಂತೆ ಅಗತ್ಯ ಸೌಲಭ್ಯ ಹಾಗೂ ಬಟ್ಟೆಗಳನ್ನು ಒದಗಿಸುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈ ತೀರ್ಪು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಂತ್ರಸ್ತ ಕುಟುಂಬಕ್ಕೆ ಕೊನೆಗೂ ನ್ಯಾಯ ಸಿಕ್ಕಂತಾಗಿದೆ.

Comments

Leave a Comment

Prev Post ವೈದ್ಯೋ ನಾರಾಯಣೋ ಅಲ್ಲ... ‘ವೈದ್ಯೋ ರಾಕ್ಷಸೋ!’: ಕಲ್ಯಾಣ ಮಂಟಪದ ವ್ಯಾಪಾರಕ್ಕಾಗಿ ಪೆಟ್ರೋಲ್ ಹಚ್ಚಿದ ಎಂಬಿಬಿಎಸ್ ಡಾಕ್ಟರ್!
Next Post ಜಾಗತಿಕ ತೈಲ ಮಾರುಕಟ್ಟೆಗೆ ನಿರಾಳ: ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತ - ಇರಾನ್ ಸರ್ಕಾರದ ಐತಿಹಾಸಿಕ ನಿರ್ಧಾರ!

ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಿನಿಮಾಗಳ ಹಿಂದಿಕ್ಕಿದ ‘ಕಾಂತಾರ 1’

Kantara Chapter 1 box office: ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ 100 ಕೋಟಿಯ ಗಡಿಯತ್ತ ಸಿನಿಮಾ ದಾಪುಗಾಲು ಹಾಕಿದ್ದು ಆಯಾ ರಾಜ್ಯಗಳಲ್ಲಿ ಕೆಲ ಹೊಸ ದಾಖಲೆಗಳನ್ನು ಸಹ ಬರೆದಿದೆ. ಉತ್ತರ ಭಾರತದಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಈಗಾಗಲೇ ಆಮಿರ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರ ಹಿಟ್ ಸಿನಿಮಾಗಳ ಗಳಿಕೆಯ ದಾಖಲೆಗಳನ್ನೇ ಮುರಿದು ಹಾಕಿದೆ.

ಬಾರದ ಲೋಕಕ್ಕೆ ಹೋದ ‘ಉಷಾ’: ತಪ್ಪು ಒಪ್ಪಿಕೊಂಡರೂ ಮನ್ನಿಸಲಿಲ್ಲವೇ ಈ ಸಮಾಜ?

​"ನಾನು ತಪ್ಪು ಮಾಡಿದ್ದು ನಿಜ, ಆದ್ರೆ ಈ ಕಿರುಕುಳ ತಾಳಲಾರೆ.." - ಕಣ್ಣೀರು ಹಾಕುತ್ತಲೇ ಸಾವಿನ ಮನೆ ಸೇರಿದ ಅಬಲೆ!

ಧಾರವಾಡ ಸೆಂಟ್ರಲ್ ಜೈಲ್ 'ಡ್ರಗ್ಸ್' ದಂಧೆ ಅಡ್ಡ: ಬೇಲಿಯೇ ಎದ್ದು ಹೊಲ ಮೇಯ್ದ ರಣರೋಚಕ ಸ್ಟೋರಿ!

ಕತ್ತಲಲ್ಲಿ ಖೈದಿಗಳಿಗೆ 'ಕಿಕ್' ನೀಡುತ್ತಿದ್ದ ಖಾಕಿಧಾರಿಗಳು: ಮುತಾಲಿಕ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರ ಮಿಡ್‌ನೈಟ್ ಆಪರೇಷನ್ ಸಕ್ಸಸ್!

ಮಂಗಳೂರಿನಲ್ಲಿ ನೆತ್ತರು ಹರಿಸಿದ ಗ್ಯಾಂಗ್‌ವರ್: ತೊಕ್ಕೊಟ್ಟು ಫ್ಲೈಓವರ್ ಮೇಲೆ 'ಟಾಬ್ಲೆಟ್ ಆರಿಫ್' ಭೀಕರ ಕೊಲೆ!

ಸಿನಿಮೀಯ ಮಾದರಿಯಲ್ಲಿ ನಡೆದ ಹತ್ಯೆ: ಬೈಕ್ ಸವಾರನ ಮೇಲೆ ಕಾರ್ ಹರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾದ ದುಷ್ಕರ್ಮಿಗಳು!

ತುಂಗಭದ್ರಾ ನದಿಯ ಮಡಿಲಲ್ಲಿ ಕರಗಿದ ಕನಸುಗಳು: ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ

ಮದುವೆಯ ಸಂಭ್ರಮದ ನಡುವೆ ಮರಣ ಮೃದಂಗ: ರಾಯಚೂರು ಕುಟುಂಬದಲ್ಲಿ ಆವರಿಸಿದ ಶೋಕದ ಕಾರ್ಮೋಡ

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಯಲು: ಡಾ. ಸಮೀಕ್ಷಾ ರೆಡ್ಡಿ ಸಾವಿನ ಸುತ್ತ ನಿಗೂಢ ಜಾಲ!

ಅಲ್ಲಿ ಎಲ್ಲವೂ ಸರಿಯಿಲ್ಲ!" - ವೈದ್ಯೆಯ ಕೊನೆಯ ವಾಟ್ಸಪ್ ಸಂದೇಶಗಳು ಬಯಲು ಮಾಡಿದ ಭೀಕರ ವಾಸ್ತವ!

Read all News